ಚಿಕ್ಕಮಗಳೂರು: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ದೇವಿರಮ್ಮನ ಸನ್ನಿಧಾನಕ್ಕೆ ಜನಸಾಗರವೇ ಹರಿದು ಬಂದಿದೆ.
3 ದಿನಗಳ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದ್ದು, ಬಿಂಡಿಗ ದೇವೀರಮ್ಮನ ದೇಗುಲದಲ್ಲಿ ಇಂದು ಕೊಂಡೋತ್ಸವ ನಡೆಯಲಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿಯಿರುವ ದೇವೀರಮ್ಮ ಬೆಟ್ಟ ಚಂದ್ರದ್ರೋಣ ಪರ್ವತದ ಸಾಲಿನಲ್ಲಿದೆ. 3 ದಿನಗಳ ದೇವೀರಮ್ಮನ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದ್ದು, ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೇವೀರಮ್ಮ ಬೆಟ್ಟ ಸಮುದ್ರ ಮಟ್ಟದಿಂದ 3,000 ಅಡಿ ಎತ್ತರದಲ್ಲಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಮಾಯ್ಕಾರ ಮಾದಪ್ಪನ ಸನ್ನಿಧಿಗೆ ಭಕ್ತ ಸಾಗರ ಹರಿದು ಬರುತ್ತಿದೆ. ನೂರಾರು ಭಕ್ತರು ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಬರುತ್ತಿದ್ದಾರೆ.