
ಗದಗ: ಕಾನೂನು ಇಲಾಖೆಯನ್ನು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಮಾಡಲು ಆದೇಶಿಸಲಾಗಿದೆ.
ಗದಗದಲ್ಲಿ ಮಾತನಾಡಿದ ಕಾನೂನು, ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ ಅವರು, ಕಾನೂನು ಇಲಾಖೆಯ ಹೆಸರು ಅದರ ಕಾರ್ಯ ಪ್ರತಿಬಿಂಬಿಸಬೇಕು ಎನ್ನುವ ಉದ್ದೇಶದಿಂದ ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ಕಾನೂನು ಇಲಾಖೆಗೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಎಂದು ಮರುನಾಮಕರಣ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.