ಹಾಸನ : ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬೆಯ ಗರ್ಭಗುಡಿ ಬಾಗಿಲು ಓಪನ್ ಆಗಿದ್ದು, ಇಂದಿನಿಂದ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. .
ಆಶ್ವೀಜ ಮಾಸದ ಮೊದಲ ಗುರುವಾರ (ನಿನ್ನೆ) ಮಧ್ಯಾಹ್ನ 12.24ಕ್ಕೆ ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದೆ.
ಇಂದಿನಿಂದ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ಲಕ್ಷಾಂತರ ಜನ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ.ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಬರುತ್ತಾರೆ.