ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ನಟ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಗಣ್ಯರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಹಲವು ಗಣ್ಯರ ಸಮ್ಮುಖದಲ್ಲಿ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ.