ಬೆಂಗಳೂರು : ಶಾಲಾ ಸಮಯ ಬದಲಾವಣೆ ಬಗ್ಗೆ ಇಂದು ನಿಗದಿಯಾಗಿದ್ದ ‘ಶಿಕ್ಷಣ ಇಲಾಖೆ’ ಯ ಮಹತ್ವದ ಸಭೆ ಅ.9 ಕ್ಕೆ ಮುಂದೂಡಿಕೆಯಾಗಿದೆ.
ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಶಾಲಾ ಸಮಯ ಬದಲಾವಣೆ ಬಗ್ಗೆ ಚರ್ಚೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಮುಖಂಡರ ಸಭೆ ಕರೆದು ತೀರ್ಮಾನಿಸಲು ಮುಂದಾಗಿತ್ತು.
ರಾಜ್ಯಾದ್ಯಂತ ಬಹುತೇಕ ಶಾಲೆಗಳಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಗಳು ಆರಂಭವಾಗುತ್ತವೆ. ಶಾಲಾ ಸಮಯವನ್ನು ಅರ್ಧ ಗಂಟೆ ಬೇಗನೆ ಮಾಡಬೇಕೆಂಬ ಚಿಂತನೆ ನಡೆಸಿತ್ತು. ಈ ಹಿನ್ನೆಲೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಮುಖಂಡರ ಸಭೆ ಕರೆದು ತೀರ್ಮಾನಿಸಲು ಮುಂದಾಗಿತ್ತು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಶಾಲೆ ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಸಂಚಾರದಟ್ಟಣೆಗೆ ಪ್ರಮುಖವಾಗಿ ಕಾರಣವಾಗಿರುವ ಶಾಲೆ, ಕೈಗಾರಿಕೆ, ವಾಣಿಜ್ಯ ಸಂಸ್ಥೆ, ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಇತರರ ಸಭೆ ಕರೆದು ಚರ್ಚೆ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ನಿಗದಿಯಾಗಿದ್ದ ‘ಶಿಕ್ಷಣ ಇಲಾಖೆ’ ಯ ಮಹತ್ವದ ಸಭೆ ಅ.9 ಕ್ಕೆ ಮುಂದೂಡಿಕೆಯಾಗಿದೆ.