alex Certify BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ನಾವು-ಮನುಜರು’ ಕಾರ್ಯಕ್ರಮ ನಡೆಸುವಂತೆ ‘ಶಿಕ್ಷಣ ಇಲಾಖೆ’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ನಾವು-ಮನುಜರು’ ಕಾರ್ಯಕ್ರಮ ನಡೆಸುವಂತೆ ‘ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ನಾವು-ಮನುಜರು’ ಕಾರ್ಯಕ್ರಮ ನಡೆಸುವಂತೆ ‘ಶಿಕ್ಷಣ ಇಲಾಖೆ’ ಆದೇಶ ಹೊರಡಿಸಿದೆ.

ಏನಿದೆ ಸುತ್ತೋಲೆಯಲ್ಲಿ..?

ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು-ಮನುಜರು’ ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ (120 ನಿಮಿಷ – 40 ನಿಮಿಷಗಳ 3 ಅವಧಿಗಳು) ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿದೆ. ಸದರಿ ಆದೇಶದ ಅನುಬಂಧದ ಕ್ರಿಯಾಯೋಜನೆಯಲ್ಲಿ ನೀಡಿರುವಂತೆ ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ 1 ಅವಧಿ ಮತ್ತು ಸಾ.ಉ.ಉ.ಕಾ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನ ಮಾಡಲು ತಿಳಿಸಿದೆ.

ಮೇಲುಸ್ತುವಾರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ, ಖಾತರಿಪಡಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಜಿಲ್ಲಾ ಹಂತದಲ್ಲಿ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ಧಿ ರವರು ಜಂಟಿಯಾಗಿ ವರದಿಯನ್ನು ಸಿದ್ಧಪಡಿಸಿ DSERT ಕಛೇರಿಗೆ ಸಲ್ಲಿಸಲು ತಿಳಿಸಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...