ಬೆಂಗಳೂರು : ರಾಜ್ಯದಲ್ಲಿ ‘ವಿದ್ಯುತ್ ದರ’ ಹೆಚ್ಚಳವಾಗಲಿದೆ ಎಂಬ ವದಂತಿ ಹಬ್ಬಿತ್ತು. ಈ ಹಿನ್ನೆಲೆ ಇಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸುದ್ದಿಗಾರರರಿಗೆ ಈ ಬಗ್ಗೆ ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ, ದರ ಹೆಚ್ಚಳ ಮಾಡೋಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.ವಿದ್ಯುತ್ ಬಿಲ್ ಹೆಚ್ಚಳದ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ನಡೆದಿಲ್ಲ.
ರಾಜ್ಯದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿದೆ. ನಮ್ಮ ರಾಜ್ಯದಲ್ಲಿ ವಿದ್ಯುತ್ ಬಳಸಿ ಬೇರೆ ಕಡೆ ಮಾರಾಟ ಮಾಡುವಷ್ಟು ವಿದ್ಯುತ್ ನಮ್ಮ ಬಳಿ ಇದೆ ಎಂದು ಅವರು ಹೇಳಿದರು. ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿಗೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿವೆ . ವಿದ್ಯುತ್ ದರ ಹೆಚ್ಚಳವಾಗಲಿದೆ ಎಂದು ಹೇಳಲಾಗಿತ್ತು.
ವಾಲ್ಮೀಕಿ ಹಗರಣದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು ಈ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ ಮಾಡುತ್ತಿದೆ, ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡೋದಿಲ್ಲ. ಎಸ್ ಐಟಿ ತನಿಖಾ ವರದಿ ಬರುವವರೆಗೆ ಕಾಯೋಣ ಎಂದರು.