ಬೆಂಗಳೂರು : ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ಎಲ್ಲೆಡೆ ರಾಮನ ಜಪ ತಪ ಶುರುವಾಗಿದೆ.
ಇದರ ನಡುವೆ ಪ್ರಧಾನಿ ಮೋದಿ ಕನ್ನಡದ ಪೂಜಿಸಲೆಂದೇ ಹೂಗಳ ತಂದೆ ಹಾಡು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಡಿನ ಲಿಂಕ್ ಅನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ., ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ಗಾಯನವು ಪ್ರಭು ಶ್ರೀ ರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.