ಗಂಡನ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಹಿಳಾ ಪೊಲೀಸ್ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆಗೆ ಶರಣಾಗಿದ್ದು, ನಿದ್ರೆ ಮಾತ್ರೆ ಸೇವಿಸಿ ಬರೌನಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರೀತಿ ಶರ್ಮಾ ಎಂಬುವವರೇ ಆತ್ಮಹತ್ಯೆಗೆ ಶರಣಾದ ಪೊಲೀಸ್ ಅಧಿಕಾರಿ. ಬಿಹಾರ ರಾಜ್ಯದ ಬರೌನಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ರೋಷನ್ ಕುಮಾರ್ ಎಂಬುವವರನ್ನು ಇತ್ತೀಚೆಗಷ್ಟೇ ವಿವಾಹವಾಗಿದ್ದರು.
ಆದರೆ, ಇವರ ದಾಂಪತ್ಯದಲ್ಲಿ ಬಿರುಕು ಮೂಡಿತ್ತು ಎನ್ನಲಾಗಿದ್ದು, ಶೂ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರೋಷನ್ ಕುಮಾರ್ ಕಳೆದ ಒಂದು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದರು. ಇತ್ತೀಚೆಗೆ ಇವರಿಬ್ಬರ ಮಧ್ಯೆ ಮಾತು ಕೂಡ ಇರಲಿಲ್ಲ. ಹೀಗಾಗಿಯೇ ರೋಷನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಆತ್ಮಹತ್ಯೆಗೆ ಪ್ರೀತಿ ಪ್ರಚೋದನೆ ನೀಡಿದ್ದಾರೆ ಎಂದು ರೋಷನ್ ಕುಮಾರ್ ಕುಟುಂಬಸ್ಥರು ಆರೋಪಿಸಿದ್ದರು.
ಪತಿ ಸಾವಿನ ನಂತರ ಪ್ರೀತಿ ಖಿನ್ನತೆಗೆ ಜಾರಿದ್ದರು. ಕಳೆದ ಒಂದು ತಿಂಗಳಿಂದ ಸರಿಯಾಗಿ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ರಜೆಯ ಮೇಲೆ ಮನೆಯಲ್ಲಿಯೇ ಇದ್ದರು. ಮಾತ್ರೆ ಸೇವಿಸಿ ನಿತ್ರಾಣ ಸ್ಥಿತಿಯಲ್ಲಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.