
ಬೆಳ್ಳಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟ ವಿಜಯ್ ಸೂರ್ಯ ಅಭಿನಯದ ‘ವೀರಪುತ್ರ’ ಸಿನಿಮಾದ ಫಸ್ಟ್ ಲುಕ್ ಇದೇ ಸೆಪ್ಟೆಂಬರ್ 7 ರಂದು ಬೆಳಿಗ್ಗೆ 11-5ಕ್ಕೆ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ.
ಡಾ. ದೇವರಾಜ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ತನ್ವಿ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಗುರು ಬಂಡಿ ನಿರ್ಮಾಣ ಮಾಡಿದ್ದಾರೆ.
ತನ್ನ ಶೀರ್ಷಿಕೆಯಿಂದಲೇ ಸಕ್ಕತ್ ಸೌಂಡ್ ಮಾಡಿರುವ ಈ ಸಿನಿಮಾದಲ್ಲಿ ಲೇಖಾ ಚಂದ್ರ ನಾಯಕಿಯಾಗಿ ಅಭಿನಯಿಸಿದ್ದು, ಖ್ಯಾತ ಸಂಗೀತ ನಿರ್ದೇಶಕ ಜುಡಾ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ.
