
ಚಂದ್ರಜಿತ್ ಬೆಳ್ಳಿಯಪ್ಪ ರಚಿಸಿ ನಿರ್ದೇಶಿಸಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಗೀತೆ ಪರಂವಾ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಓ ಅನಾಹಿತ ಎಂಬ ಈ ಹಾಡಿಗೆ ಕಪಿಲ್ ಕಪಿಲನ್ ಧ್ವನಿಯಾಗಿದ್ದು, ಚಂದ್ರಜಿತ್ ಬೆಳ್ಳಿಯಪ್ಪ ಸಾಹಿತ್ಯ ಬರೆದಿದ್ದಾರೆ.
ಈ ಚಿತ್ರವನ್ನು ಗಗನ್ ಬದರಿಯಾ ನಿರ್ಮಾಣ ಮಾಡಿದ್ದು, ವಿಹಾನ್ ಮತ್ತು ಅಂಕಿತ ಅಮರ್ ನಾಯಕ – ನಾಯಕಿಯಾಗಿದ್ದಾರೆ. ಇನ್ನುಳಿದಂತೆ ಗಿರಿಜಾ ಶೆಟ್ಟರ್, ಮಯೂರಿ ನಟರಾಜ, ಸಲ್ಮಿನ್ ಶೆರಿಫ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಗಗನ್ ಬದರಿಯಾ ಸಂಗೀತ ಸಂಯೋಜನೆ ನೀಡಿದ್ದು. ರಕ್ಷಿತ್ ಸಂಕಲನ, ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ಚಂದ್ರಜಿತ್ ಬೆಳ್ಳಿಯಪ್ಪ ಅವರ ಸಂಭಾಷಣೆ, ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ.