
ಶ್ರೀನಿವಾಸ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೊದಲ ಗೀತೆ ಇದೇ ಮೇ 25ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.
ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ. ‘My Marriage is Fixed’ ಎಂಬ ಈ ಹಾಡಿಗೆ ಚಂದನ್ ಶೆಟ್ಟಿ ಧ್ವನಿಯಾಗಿದ್ದು ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಮಾಳವಿಕಾ ನಾಯರ್ ಪ್ರಮುಖ ಪಾತ್ರದಲ್ಲಿದ್ದಾರೆ.
ಗಿರೀಶ್ ಶಿವಣ್ಣ, ವಿ ಟಿ ವಿ ಗಣೇಶ್, ಶರಣ್ಯ ಶೆಟ್ಟಿ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆಎಮ್ ಪ್ರಕಾಶ್ ಸಂಕಲನ, ವಿಜಯ್ ಈಶ್ವರ್ ಸಂಭಾಷಣೆ, ವೆಂಕಟ್ ಪ್ರಸಾದ್ ಛಾಯಾಗ್ರಹಣವಿದೆ.