alex Certify ಇಂದು ಬಿಡುಗಡೆಯಾಗಲಿದೆ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬಿಡುಗಡೆಯಾಗಲಿದೆ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು

ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ದೇವದಾಸ್ ಕಾಪಿಕಾಡ್ ಆಕ್ಷನ್ ಕಟ್ ಹೇಳಿರುವ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ.

”ಅಚ್ಚುಮೆಚ್ಚು ನಿನ್ನ ಕಂಡರೆ” ಎಂಬ ಈ ಮೆಲೋಡಿ ಹಾಡನ್ನು ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ. ಈ ಚಿತ್ರದಲ್ಲಿ ಅಜಯ್ ಪೃಥ್ವಿ ಮತ್ತು ರಿಷಿಕ ನಾಯಕ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಈ ಸಿನಿಮಾ ಟೀಸರ್ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ನೋಡುಗರ ಗಮನ ಸೆಳೆದಿತ್ತು.

ಈ ಚಿತ್ರವನ್ನು ವಿ ರವಿಕುಮಾರ್ ಮತ್ತು ಶಾಮ್ ಶುದ್ದಿನ್ ನಿರ್ಮಾಣ ಮಾಡಿದ್ದು, ಅರ್ಜುನ್ ಕಾಪಿಕಾಡ್ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸುಜಿತ್ ನಾಯಕ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...