
ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಸಿನಿಮಾದ ಮೊದಲ ಹಾಡು ಜನವರಿ ಮೂರರಂದು ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ instagram ನಲ್ಲಿ ಹಂಚಿಕೊಂಡಿದೆ. ಹರಿಚರಣ್ ಧ್ವನಿಯಾಗಿರುವ ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.
ಲೋಹಿತ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿದ್ದು, ಕುಮಾರ್ ತಮ್ಮ ಕುಮಾರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ರವಿಚಂದ್ರನ್ ಅವರ ಸಂಕಲನವಿದ್ದು, ಪಂಡಿ ಕುಮಾರ್ ಛಾಯಾಗ್ರಹಣವಿದೆ.
