
ಯುವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಮೊಟ್ಟ ಮೊದಲ ಹಾಡು ಇದೇ ಮಾರ್ಚ್ 2ನೇ ತಾರೀಕಿನಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ.
ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ. ”ಒಬ್ಬನೇ ಶಿವ ಒಬ್ಬನೇ ಯುವ” ಎಂಬ ಈ ಹಾಡನ್ನು ಚಾಮರಾಜನಗರ ಟೆಂಪಲ್ ಗ್ರೌಂಡ್ ನಲ್ಲಿ ರಿಲೀಸ್ ಮಾಡಲಾಗುತ್ತಿದೆ.
ಸಂತೋಷ್ ಆನಂದ್ ರಾಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಯುವ ರಾಜಕುಮಾರ್ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದು, ಅಜನಿಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.
