ಮಹಾರಾಷ್ಟ್ರದ ಥಾಣೆಯಲ್ಲಿ ಶುಕ್ರವಾರ ಬೆಳಗ್ಗೆ 6.45 ರ ಸುಮಾರಿಗೆ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ 21 ವರ್ಷದ ವಿದ್ಯಾರ್ಥಿನಿಗೆ ಆಟೋ ಚಾಲಕನೊಬ್ಬ ಅಶ್ಲೀಲ ಪದಗಳಿಂದ ಚುಡಾಯಿಸಿದ್ದಲ್ಲದೆ ಆಕೆಯ ಕೈಹಿಡಿದೆಳೆದಿದ್ದು, ಈ ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಈ ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿದ್ದಾಗ ಆಟೋ ಚಾಲಕ ಚುಡಾಯಿಸಿದ್ದಾನೆ. ಬಳಿಕ ಆಕೆಯ ಕೈ ಹಿಡಿದು ಎಳೆದಿದ್ದು, ವಿದ್ಯಾರ್ಥಿನಿ ಪ್ರತಿರೋಧ ತೋರಿದ್ದಾಳೆ. ಆಗ ಆತ ಅಲ್ಲಿಂದ ಆಟೋ ಸಮೇತ ಪರಾರಿಯಾಗಲು ಯತ್ನಿಸಿದ್ದಾನೆ.
ಆದರೆ ಈ ಧೈರ್ಯಶಾಲಿ ಯುವತಿ ಆತ ತಪ್ಪಿಸಿಕೊಳ್ಳದಂತೆ ಹಿಡಿದ ವೇಳೆ ಆಟೋ ಸಮೇತ ಆಕೆಯನ್ನು 500 ಮೀಟರ್ವರೆಗೆ ಎಳೆದುಕೊಂಡು ಹೋಗಿದ್ದಾನೆ. ವಿದ್ಯಾರ್ಥಿನಿ ಕೆಳಗೆ ಬಿದ್ದ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈಗ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ತಂಡಗಳನ್ನು ರಚಿಸಿಕೊಂಡು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.