alex Certify BREAKING : ‘ಯುವನಿಧಿ’ ಬೆನ್ನಲ್ಲೇ ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಯುವನಿಧಿ’ ಬೆನ್ನಲ್ಲೇ ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ ನಿರ್ಧಾರ

ಬೆಂಗಳೂರು : ‘ಯುವನಿಧಿ’ ಯೋಜನೆ ನೋಂದಣಿ ಶುರುವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ರಾಜ್ಯ ಮಟ್ಟದಲ್ಲಿ ಬೃಹತ್ ‘ಉದ್ಯೋಗ ಮೇಳ’ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ  ಇಂದು  ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ, ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರರು ಹಾಜರಿರಲಿದ್ದಾರೆ . ಸಭೆಯಲ್ಲಿ ಉದ್ಯೋಗ ಮೇಳದ ರೂಪು ರೇಷೆಗಳ ಬಗ್ಗೆ ನಿರ್ಧಾರವಾಗುವ ಸಾಧ್ಯತೆಯಿದೆ.

ರಾಜ್ಯದ ಯುವಶಕ್ತಿಯನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಯುವನಿಧಿ ಯೋಜನೆ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರ ಬೃಹತ್ ಮಟ್ಟದ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದೆ.

ಕರ್ನಾಟಕ ಸರ್ಕಾರವು 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ, ಡಿಪ್ಲೊಮ ಪಾಸಾದ ನಿರುದ್ಯೋಗಿಗಳಿಗೆ ನೀಡುವುದಾಗಿ ಘೋಷಣೆ ಮಾಡಿದ್ದ ಯುವನಿಧಿ ಯೋಜನೆ ಜಾರಿಗೆ ಸಕಲ ಸಿದ್ಧತೆ ನಡೆಸಿದೆ. ಅದರ ಭಾಗವಾಗಿ ನಿರುದ್ಯೋಗಿಗಳಿಂದ ಅರ್ಜಿ ಸ್ವೀಕಾರವನ್ನು ಮಾಡಿದೆ. ಕರ್ನಾಟಕ ಸರ್ಕಾರವು 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ, ಡಿಪ್ಲೊಮ ಪಾಸಾದ ನಿರುದ್ಯೋಗಿಗಳಿಗೆ ನೀಡುವುದಾಗಿ ಘೋಷಣೆ ಮಾಡಿದ್ದ ಯುವನಿಧಿ ಯೋಜನೆ ಜಾರಿಗೆ ಸಕಲ ಸಿದ್ಧತೆ ನಡೆಸಿದೆ. ಅದರ ಭಾಗವಾಗಿ ನಿರುದ್ಯೋಗಿಗಳಿಂದ ಅರ್ಜಿ ಸ್ವೀಕಾರವನ್ನು ಮಾಡಿದೆ. ಘೋಷಣೆ ಮಾಡಿದಂತೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...