ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು.
ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಬಂಧನಕ್ಕೊಳಗಾಗಿ ನಂತರ ಬಿಡುಗಡೆಯಾಗಿದ್ದರು. ಇದಾದ ಬಳಿಕ ಹಲವು ಹುಲಿ ಉಗುರು ಪ್ರಕರಣಗಳು ಬೆಳಕಿಗೆ ಬಂದಿತ್ತು.
ಇದೀಗ ರಾಜ್ಯ ಸರ್ಕಾರವು ಹುಲಿ ಉಗುರುಗಳನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ಚಿಂತನೆ ನಡೆಸುತ್ತಿದೆ. ಹುಲಿ ಉಗುರು ಸೇರಿ ಎಲ್ಲಾ ರೀತಿಯ ವನ್ಯಜೀವಿ ವಸ್ತುಗಳನ್ನು ಕಾನೂನಿಗೆ ಒಪ್ಪಿಸುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಮಾಲೋಚನೆ ನಡೆಸಿದ್ದಾರೆ.
ಈ ಬಗ್ಗೆ ಅರಣ್ಯ ಅಧಿಕಾರಿಗಳ ಸಚಿವ ಈಶ್ವರ ಖಂಡ್ರೆ ಚರ್ಚೆ ನಡೆಸಿದ್ದು, ವನ್ಯಜೀವಿಗಳ ವಸ್ತು ಮರಳಿಸುವ ಕುರಿತು ಸಮಾಲೋಚನೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ವಸ್ತು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.