ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಆದೇಶ ವಾಪಸ್ ಪಡೆಯಲಾಗಿದೆ.
ದೇವಸ್ಥಾನಗಳ ಜೀರ್ಣೋದ್ಧಾರಸೇರಿದಂತೆ ವಿವಿಧ ಕಾರ್ಯಕ್ಕಾಗಿ ನಿಗದಿ ಮಾಡಲಾಗಿದ್ದ ಅನುದಾನ ಬಿಡುಗಡೆಗೆ ತಡೆ ನೀಡುವ ಕುರಿ ತಂತೆ ಹೊರಡಿಸಿದ್ದ ಆದೇಶವನ್ನು ಮುಜರಾಯಿ ಇಲಾಖೆ ಆಯುಕ್ತರು ಶುಕ್ರವಾರ ಹಿಂಪಡೆದಿದ್ದಾರೆ.
ಬಿಜೆಪಿ ಅವಧಿಯಲ್ಲಿ ದೇವಸ್ಥಾನ ಸೇರಿ ದಂತೆ ಧಾರ್ಮಿಕಕೇಂದ್ರಗಳಿಗೆ ಸರ್ಕಾರದಿಂದ 142 ಕೋಟಿ ರು. ಅನುದಾನ ಘೋಷಿಸಲಾ ಗಿತ್ತು. ಆ ಅನುದಾನದಲ್ಲಿ 50ಕ್ಕೂ ಹೆಚ್ಚಿನ ದೇವಸ್ಥಾನಗಳು ಮತ್ತು 150ಕ್ಕೂ ಹೆಚ್ಚಿನ ಮಠಗಳಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕಿತ್ತು. ಆದರೆ, ಅನುದಾನ ಘೋಷಣೆಯಾಗಿರುವ ಕಾರ್ಯ ದೇವಸ್ಥಾನಗಳಲ್ಲಿ ಇನ್ನೂ ಅಭಿವೃದ್ಧಿ ಆರಂಭವಾಗದಿದ್ದರೆ ಅನುದಾನ ಬಿಡುಗಡೆ ಮಾಡದೆ ತಡೆಹಿಡಿಯುವಂತೆ ಮುಜರಾಯಿ
ಇಲಾಖೆ ಆಯುಕ್ತರು ಆ.14ರಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆದೇಶಿಸಿದ್ದರು. ಭಾರಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಹಿಂದಿನ ಆದೇಶವನ್ನು ಮುಜರಾಯಿ ಇಲಾಖೆ ಆಯುಕ್ತರು ಹಿಂಪಡೆದಿದ್ದಾರೆ.
ಮುಜರಾಯಿ ಇಲಾಖೆ ದೇವಸ್ಥಾನಗಳ ಹಣ ತಡೆ ಹಿಡಿದಿರುವ ಆದೇಶವನ್ನು ಹಿಂಪಡೆಯುವಂತೆ ಆಯುಕ್ತರಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಗೊಂದಲದಿಂದ ಆಯುಕ್ತರು ಹಣ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ. ಕೇವಲ ದೇವಸ್ಥಾನ ಗಳ ಜೀರ್ಣೋದ್ಧಾರ, ಕಾಮಗಾರಿಗಳ ವಿವರ ಪಡೆಯುವಂತೆ ಸಚಿವರು ಸೂಚಿಸಿದ್ದರು. ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರು ಆದೇಶ ವಾಪಸ್ ಪಡೆದಿದ್ದಾರೆ ಎಂದರು.
ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ ಅನುದಾನ ಬಿಡುಗಡೆಗೆ ಮೂರು ನಿರ್ದೇಶನದ ಮೂಲಕ ಹಣ ಹಂಚಿಕೆ ಮಾಡದಂತೆ. ದೇವಸ್ಥಾನಗಳಿಗೆ ಹಣ ಬಿಡುಗಡೆಗೆ ತಡೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸೂಚನೆ ನೀಡಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಮುಜರಾಯಿ ಇಲಾಖೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಗರಂ ಆಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸುತ್ತೇನೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.ಈ ಎಲ್ಲಾ ಬೆಳವಣಿಗೆಗಳ ನಂತರ ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಇಲಾಖೆ ಆಯುಕ್ತರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದು, ಇಲಾಖೆ ಆಯುಕ್ತರು ಆದೇಶ ವಾಪಸ್ ಪಡೆದಿದ್ದಾರೆ .