alex Certify ಹಿರಿಯ ನಟಿ ಲೀಲಾವತಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಟಿ ಲೀಲಾವತಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...