ಬೆಂಗಳೂರು: ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸುವುದು ಸ್ವಾತಂತ್ರ್ಯಹರಣವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಪರಾಧ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತುಪಡಿಸುವಂತಹ ಸಾಕ್ಷಗಳಿಲ್ಲದೆ ದೂರು ದಾಖಲಿಸಿದಾಗ ಅದು ಸಂವಿಧಾನದ 21ನೇ ಪರಿಚ್ಛೇದ ಕಲ್ಪಿಸಿದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಆಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಮಹಾರಾಷ್ಟ್ರ ನಿವಾಸಿ ವಿಫಲ್ ಪ್ರಕಾಶ್ ಪಾಟೀಲ್ ಅವರು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಚಿಕ್ಕೋಡಿ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಸಾಕ್ಷಗಳಿಲ್ಲದೆ ದೂರು ದಾಖಲು ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗಿದೆ.