ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಘೋಷಣೆ ಮಾಡಲಾಗಿದೆ. ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
ಐಐಐಟಿ-ಬೆಂಗಳೂರು ಸಂಸ್ಥೆಯ ಮೂಲಸೌಕರ್ಯ ವಿಸ್ತರಣಾ ಯೋಜನೆಗೆ ಸರ್ಕಾರವು ಒಟ್ಟು ಯೋಜನಾ ವೆಚ್ಚ ರೂ.817 ಕೋಟಿಗಳ ಪೈಕಿ ರೂ.285.95 ಕೋಟಿಗಳ (ಶೇ.35ರಷ್ಟು) ಕೊಡುಗೆ ನೀಡಲು ಅನುಮೋದನೆ. ಪ್ರಸಕ್ತ ಸಾಲಿನಲ್ಲಿ ಲಭ್ಯವಿರುವ ರೂ.25 ಕೋಟಿಗಳ ಆರಂಭಿಕ ಹಂಚಿಕೆಯನ್ನು ವಿತರಿಸಿ, ಉಳಿದ ಕೊಡುಗೆಗಳನ್ನು ಮುಂದಿನ ಏಳು ವರ್ಷಗಳಲ್ಲಿ ಹಂತ ಹಂತವಾಗಿ ನೀಡಲು ಅನುಮೋದನೆ.
ವಿಜಯಪುರ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ವಿಜಯಪುರ ಕಿರು ತಾರಾಲಯ ಯೋಜನೆಯ ರೂ. 12.88 ಕೋಟಿ ಅಂದಾಜು ವೆಚ್ಚದ ಪರಿಷ್ಕೃತ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
• 2024-25ನೇ ಸಾಲಿನಿಂದ ಯೋಜನಾ ವೆಚ್ಚ ರೂ.15.30 ಕೋಟಿಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 306 ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಪ್ರಾರಂಭಿಸಲು ಅನುಕೂಲವಾಗುವಂತೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಬೋಧಿಸುವ ಶಿಕ್ಷಣ ತರಬೇತುದಾರರನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ನಿರ್ಧಾರ
• ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯ 23 ಗ್ರಾಮಗಳನ್ನೊಳಗೊಂಡ ಪ್ರದೇಶವನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನ.
ನನ್ನ ಅಧ್ಯಕ್ಷತೆಯಲ್ಲಿ ದಿನಾಂಕ 20/02/2025ರ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಈ ಕೆಳಕಂಡಂತಿವೆ #CabinetDecisions pic.twitter.com/BZI6UwZdnw
— Siddaramaiah (@siddaramaiah) February 21, 2025
ನನ್ನ ಅಧ್ಯಕ್ಷತೆಯಲ್ಲಿ ದಿನಾಂಕ 20/02/2025ರ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಈ ಕೆಳಕಂಡಂತಿವೆ #CabinetDecisions pic.twitter.com/Mn4HFPOIjs
— Siddaramaiah (@siddaramaiah) February 21, 2025