ಬೆಂಗಳೂರು : ಶಾಲಾಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಾದರೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ನೀಡಿ ಎಂದು ಹಿಂದೂಪರ ಸಂಘಟನೆಗಳು ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿದೆ.
ಹಿಜಾಬ್ ಆದೇಶವನ್ನು ಹಿಂಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿಂದೂಪರ ಸಂಘಟನೆಗಳು ಕೆರಳಿದೆ. ತಾಕತ್ತಿದ್ದರೆ ಹಿಜಾಬ್ ವಾಪಸ್ ತನ್ನಿ ನೋಡೋಣ ಎಂದು ಹಿಂದೂ ಸಂಘಟನೆ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸವಾಲು ಹಾಕಿದ್ದಾರೆ. ಹಾಗೂ ಹಿಜಾಬ್ ಹಿಂದೆ ತಿರುಗುವ ಸಿದ್ದ ರಾಮಯ್ಯ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು, ನಮ್ಮ ಮಕ್ಕಳು ಕೇಸರಿ ಶಾಲು ಹಾಕುವುದನ್ನು ತಡೆಯಲಿ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸವಾಲ್ ಹಾಕಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶ್ರೀರಾಮ ವಿದ್ಯಾಸಂಸ್ಥೆ ಸ್ಥಾಪಕ ಕಲ್ಲಡ್ಕ ಪ್ರಭಾಕರ್ಭಟ್, ಸರ್ಕಾರ ಹಿಬಾಜ್ ಧರಿಸಲು ಅವಕಾಶ ನೀಡಿದರೆ ನಾವು ಕೇಸರಿ ಶಾಲು ಧರಿಸುತ್ತೇವೆ, ಟೋಪಿ ಧರಿಸಿ ಶಾಲೆಗೆ ಬರುತ್ತೇವೆ. . ತಾಕತ್ತಿದ್ದರೆ ಹಿಜಾಬ್ ವಾಪಸ್ ತನ್ನಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.
ಹಿಜಾಬ್ ಹಿಂದೆ ತಿರು ಗುವ ಸಿದ್ದರಾಮಯ್ಯ, ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ, ಹಿಜಾಬ್ಗೆ ಅವಕಾಶ ನೀಡಿದರೆ, ನಮ್ಮ ಮಕ್ಕಳು ಕೇಸರಿ ಶಾಲು ಹಾಕಿಕೊಂಡು ಬರುತ್ತಾರೆ ಎಂದು ಅನಂತ್ ಕುಮಾರ್ ಹೆಗಡೆ ಸವಾಲ್ ಹಾಕಿದ್ದಾರೆ.ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಘರ್ಷ ಹುಟ್ಟು ಹಾಕಿದೆ.
ಶಾಲೆಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ ಸಮವಸ್ತ್ರ ನೀತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸರ್ಕಾರ ಈಗ ಆದೇಶವನ್ನು ಹಿಂಪಡೆಯಲು ಮುಂದಾಗಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.