alex Certify BIGG NEWS : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ‘ಕಡಲೆಕಾಯಿ ಪರಿಷೆ’ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ‘ಕಡಲೆಕಾಯಿ ಪರಿಷೆ’ ಆರಂಭ

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಇಂದಿನಿಂದ ಮೂರು ದಿನ ನಡೆಯಲಿರುವ ಕಡಲೆಕಾಯಿ ಪರಿಷೆಗೆ 7-8 ಲಕ್ಷ ಜನರು ಬರುವ ನಿರೀಕ್ಷೆಯಿದೆ.

ಡಿ.11ರ ಬೆಳಗ್ಗೆ ಸೋಮವಾರ ಕಡಲೆಕಾಯಿ ಪರಿಷೆಗೆ ಚಾಲನೆ ಸಿಗಲಿದ್ದು, ಭದ್ರತೆಗಾಗಿ ಸುಮಾರು 600 ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಇಂದು 11 ಗಂಟೆಗೆ ಅಧಿಕೃತವಾಗಿ ಕಡಲೆಕಾಯಿ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಿದ್ದಾರೆ.

ಈ ವೇಳೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾಗಿಯಾಗಲಿದ್ದಾರೆ. ವಿವಿಧ ಊರಿನ ವಿವಿಧ ತಳಿಯ ಕಡಲೆಕಾಯಿಗಳು ಲಭ್ಯವಿರಲಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ’ ಎಂಬ ಆಹ್ವಾನದೊಂದಿಗೆ ಈ ಬಾರಿ ಪರಿಸರ ಸ್ನೇಹಿ ಪರಿಷೆಯನ್ನು ನಡೆಸಲಾಗುತ್ತಿದೆ. ಕಾರ್ಯಕ್ಕೆ 10 ಎನ್ಜಿಒಗಳು, ಕೆಲವು ಕಾಲೇಜುಗಳು ಕೂಡ ಕೈಜೋಡಿಸಿವೆ.

ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದ್ದು, 65 ವರ್ಷ ಮೇಲ್ಪಟ್ಟವರಿಗೆ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆದ್ದರಿಂದ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಈ ಬಾರಿಯ ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಪರಿಷೆಯನ್ನು ಮಾಡಲು ಕರೆ ನೀಡಲಾಗಿದ್ದು, ಪರಿಷೆಗೆ ಬನ್ನಿ , ಬಟ್ಟೆ ಬ್ಯಾಗ್ ತನ್ನಿ ಎಂದು ಕರೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...