ಬಳ್ಳಾರಿ : ನನಗೆ ಡಯಾಬಿಟಿಸ್ ಇದೆ, ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಪತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಸಿರುಗುಪ್ಪದ ಬಲಕುಂದಿ ಗ್ರಾಮದ ನಿವಾಸಿ ರಸೂಲ್ ಸಾಬ್ ಎಂಬಾತ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಈತ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದು, ಊರಿನ ಜನರು ಬೆಚ್ಚಿ ಬಿದ್ದಿದ್ದಾರೆ.
ನನಗೆ ಮಧುಮೇಹ ಇದೆ, ಡಯಾಲಿಸಿಸ್ ಮಾಡಿಕೊಳ್ಳುತ್ತೇನೆ, ನಾನು ಪತ್ನಿಗಿಂತ ಬೇಗ ಸಾಯುತ್ತೇನೆ, ನನಗಿಂತ ಮೊದಲು ಪತ್ನಿ ಸಾಯಬೇಕು ಎಂದು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ.
ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತಿಯ ವರ್ತನೆಗೆ ಜನರು ಹಿಡಿಶಾಪ ಹಾಕಿದ್ದಾರೆ.