ಭಾರತ ಹಾಗೂ ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ ತಂಡ ಮೊದಲ ಟೆಸ್ಟ್ ನಲ್ಲಿ ಜಯಭೇರಿ ಆಗಿದ್ದು, 2ನೇ ಟೆಸ್ಟ್ ಅನ್ನು ಕೂಡ ತನ್ನದಾಗಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಇದಾದ ಬಳಿಕ ಅಕ್ಟೋಬರ್ 6 ರಿಂದ 12ರವರೆಗೆ ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಮೂರು ಟಿ 20 ಪಂದ್ಯಗಳು ನಡೆಯಲಿದ್ದು, ಭಾರತ ತಂಡದ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕಳೆದ ಐಪಿಎಲ್ ನಲ್ಲಿ ಅತಿ ವೇಗವಾಗಿ ಬೌಲಿಂಗ್ ಮಾಡುವ ಮೂಲಕ ಹೊಸ ಭರವಸೆ ಮೂಡಿಸಿದ್ದ, ಮಯಾಂಕ್ ಯಾದವ್‌ಗೆ ಮೊಟ್ಟ ಮೊದಲ ಬಾರಿಗೆ ಅಂತರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್ನಲ್ಲಿ ತಮ್ಮ ಪ್ರತಿಭೆ ತೋರಿಸುವ ಅವಕಾಶ ಸಿಕ್ಕಿದೆ.
ಭಾರತ ತಂಡ; ಸೂರ್ಯಕುಮಾರ್ ಯಾದವ್ (C), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಜಿತೇಶ್ ಶರ್ಮಾ ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ,