![](https://kannadadunia.com/wp-content/uploads/2023/05/kerala-story-kollur-temple.png)
ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸುವಂತೆ ಬ್ಯಾನರ್ ಅಳವಡಿಸಲಾಗಿದೆ.
ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಇಲ್ಲಿಗೆ ಬರುವ ಭಕ್ತರಲ್ಲಿ ಕೇರಳಿಗರ ಸಂಖ್ಯೆ ಹೆಚ್ಚಾಗಿದೆ. ಕೇರಳದಲ್ಲಿನ ಲವ್ ಜಿಹಾದ್, ಮತಾಂತರ ಪ್ರಕರಣಗಳನ್ನು ಆಧರಿಸಿ ನಿರ್ಮಿಸಿದ ‘ದಿ ಕೇರಳ ಸ್ಟೋರಿ’ ವೀಕ್ಷಿಸುವಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬ್ಯಾನರ್ ಅಳವಡಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಾಲಯದ ದ್ವಾರ, ಆವರಣಗಳಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಮಲಯಾಳಿ ಭಕ್ತರಿಗೆ ಸ್ವಾಗತ, ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬರಬೇಕೆಂದರೆ ‘ದಿ ಕೇರಳ ಸ್ಟೋರಿ’ ನೋಡಿ ಎಂದು ಇಂಗ್ಲಿಷ್ ನಲ್ಲಿ ಬರಹ ಇರುವ ಬ್ಯಾನರ್ ಅಳವಡಿಸಲಾಗಿದೆ.