ನವದೆಹಲಿ: ಕ್ರೀಡಾ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಲಾಗಿದ್ದು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಘೋಷಿಸಲಾಗಿದೆ.
ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇನ್ಮುಂದೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತದೆ. ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಾಕಿ ದಿಗ್ಗಜ ಧ್ಯಾನ್ ಚಂದ್ ಹೆಸರಿಡುವಂತೆ ಅನೇಕರು ಮನವಿ ಮಾಡಿದ್ದರು. ಆ ಕೋರಿಕೆ ಮೇರೆಗೆ ಪ್ರಶಸ್ತಿಗೆ ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಅತ್ಯುನ್ನತ ಗೌರವಾಗಿರುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲಾಗುತ್ತಿತ್ತು. ಹಾಕಿ ದಿಗ್ಗಜ ಸರ್ದಾರ್ ಸಿಂಗ್, ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರೀಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ಎಂ.ಎಸ್.ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರೀಡಾಪಟುಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ಮುಂದೆ ಈ ಪ್ರಶಸ್ತಿ ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ ಎಂದು ಕೊಡಲ್ಪಡಲಿದೆ.