ಬೆಂಗಳೂರು : ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ.
ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ ಅರ್ಹರು ಡಿಸೆಂಬರ್ 15 ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು
ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು
ಆದಾಯ ಮಿತಿ : ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ ನಗರ ಪ್ರದೇಶದಲ್ಲಿ ರೂ.2.00 ಲಕ್ಷ
ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ
ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್. ಆಧಾರ್ ಕಾರ್ಡ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ತ 24×7 ಸಹಾಯವಾಣಿ 9482300400 com Xand @SWDGok swd.gokಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.