alex Certify ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜ. 15 ಲಾಸ್ಟ್‌ ಡೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜ. 15 ಲಾಸ್ಟ್‌ ಡೇಟ್

ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ, 15 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‍ಸೈಟ್ https://ssp.postmatric.karnataka.gov.in  ನ್ನು ಹಾಗೂ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in  ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatricchelp@karnataka.gov.in ದೂ.ಸಂ. 080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...