alex Certify BREAKING : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ : ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಗಲಾಟೆ ಸಂದರ್ಭದಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ತಲ್ವಾರ್ , ಖಡ್ಗದಿಂದ ಯಾರ ಮೇಲೂ ದಾಳಿ ಆಗಿಲ್ಲ.   ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಲ್ಲು ತೂರಾಟ ಗಲಾಟೆ ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಎಲ್ಲರಿಗೂ ಒಂದೇ ರೀತಿ ಶಿಕ್ಷೆ ನೀಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಿ 60 ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...