
ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದ್ದು, ಶೀಘ್ರದಲ್ಲೇ ಇದರ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಮೇಕಿಂಗ್ ವಿಡಿಯೋ ರಿಲೀಸ್ ಆಗಲಿದೆ.
ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದು, ಜಯಮ್ಮನ ಮಗ ಖ್ಯಾತಿಯ ಕಲ್ಯಾಣಿ ಸೇರಿದಂತೆ ಪ್ರಿಯಾ, ಬ್ಲ್ಯಾಕ್ ಡ್ರ್ಯಾಗನ್ ಮಂಜು ಬಣ್ಣ ಹಚ್ಚಿದ್ದಾರೆ. ಕೃಷ್ಣ ಕ್ರಿಯೇಷನ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕಾರ್ತಿಕ್ ಸಾರ್ಥಕ್ ಹಾಗೂ ಜಗದೀಶ್ ಗೌಡ ಬಂಡವಾಳ ಹೂಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಮಾಸ್ತಿ ಡೈಲಾಗ್ ಬರೆದಿದ್ದಾರೆ.
