ಮೈಸೂರು : ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಯಾಕಪ್ಪಾ..? ನಾನು ಮದುವೆ ಆಗಿಲ್ವಾ..? ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯಗೆ ವ್ಯಕ್ತಿಯೊಬ್ಬ ತನ್ನ ಕಷ್ಟ ಹೇಳಿಕೊಂಡಿದ್ದಾನೆ. ಭಾಷಣದ ವೇಳೆ ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿ ಓರ್ವ ಹೇಳಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯರೈತರ ಮಕ್ಕಳಿಗೆ ಹೆಣ್ಣು ಕೊಡಲ್ಲ ಅಂತಾ ಏನೂ ಇಲ್ಲ. ರೈತರ ಮಕ್ಕಳಿಗೆ ಎಲ್ಲರೂ ಹೆಣ್ಣು ಕೊಡುತ್ತಾರೆ. ಸುಮ್ಮನೆ ಏನೇನೋ ಮಾತಾಡಬಾರದು. ಹಾಗಾದರೆ ರೈತರ ಹೆಣ್ಣು ಮಕ್ಕಳು, ಗಂಡು ಮಕ್ಕಳು ಮದುವೆನೇ ಆಗಿಲ್ವಾ? ನಾನು ಮದ್ವೆ ಆಗಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸ್ವಾತಂತ್ರ್ಯ ಬಂದು 76 ವರ್ಷಗಳ ನಂತರವೂ ಪ್ರಜಾಪ್ರಭುತ್ವದ ಸಂವಿಧಾನದ ಆಶಯಗಳು ಈಡೇರಿಲ್ಲ ಅಸಮಾನತೆ ಹೋಗಿಲ್ಲ. ಈ ಬಗ್ಗೆ, ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನ ಜಾರಿ ಸಂದರ್ಭದಲ್ಲೇ ಎಚ್ಚರಿಸಿದ್ದರು ಎಂದರು.