ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಒಮಿಕ್ರಾನ್ ಮತ್ತು ಕೊರೊನಾ ಸ್ಥಿತಿಯ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಡಾ. ವಿ.ಕೆ. ಪೌಲ್, ಡಾ.ಎನ್.ಕೆ. ಅರೋರಾ, NTAGI, NEGVAC ಮತ್ತು ಇತರೆ ಹಿರಿಯ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು. ಈ ಉನ್ನತ ಮಟ್ಟದ ಸಭೆಯಲ್ಲಿ ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋರೊನಾ ಮಾರ್ಗ ಸೂಚಿಗಳನ್ನು ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.