alex Certify ʼನಮ್ಮ ಹೋರಾಟ ತಡೆಯುವುದಕ್ಕಾಗಿ ಕೇಸ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ; ನಾವು ಮಾತ್ರ ಯಾವುದಕ್ಕೂ ಬಗ್ಗಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼನಮ್ಮ ಹೋರಾಟ ತಡೆಯುವುದಕ್ಕಾಗಿ ಕೇಸ್ ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ; ನಾವು ಮಾತ್ರ ಯಾವುದಕ್ಕೂ ಬಗ್ಗಲ್ಲ

ಮೈಸೂರು: ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಹೋರಾಟ ಆರಂಭವಾಗಿದ್ದಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಏನೇ ಆದರೂ ನಮ್ಮ ಪಾದಯಾತ್ರೆ ಮಾತ್ರ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ಹೋರಾಟ ಹತ್ತಿಕ್ಕುವುದಕ್ಕಾಗಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಿಸುತ್ತಿದ್ದಾರೆ. ನಮ್ಮ ಹೋರಾಟದ ಸಮಯದಲ್ಲಿ ಲಾಕ್ ಡೌನ್ ಹೇರಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಹೋರಾಟ ಮಾಡುತ್ತಿರುವುದು ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ. ಹೀಗಾಗಿ ನಮ್ಮ ಹೋರಾಟ ಹಾಗೂ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಕೂಡ ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ವೈದ್ಯರ ತಂಡ ಸಿದ್ಧಪಡಿಸಿದ್ದೇವೆ. ಮಾಸ್ಕ್ ಗಳನ್ನು ಸಿದ್ಧಪಡಿಸಲು ಹೇಳಲಾಗಿದೆ. ಕೊರೊನಾ ನಿಯಮದ ಮೂಲಕವೇ ನಮ್ಮ ಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ 9 ಸಾವಿರ ಕೋಟಿ ರೂ. ಡಿಪಿಆರ್ ಸಿದ್ಧಪಡಿಸಲಾಗಿತ್ತು. ಆಗ ನ್ಯಾಯಾಧಿಕರಣ ತಡೆ ನೀಡಿತ್ತು. ಈಗ ಯಾವುದೇ ತಕರಾರು ಇಲ್ಲ. ಆದರೆ, ಬಿಜೆಪಿ ಈ ಯೋಜನೆ ಜಾರಿಗೆ ಮುಂದಾಗುತ್ತಿಲ್ಲ. ತಮಿಳುನಾಡು ಹಾಗೂ ನಮ್ಮ ನಡುವೆ ವಿವಾದವೇ ಇಲ್ಲ. ಸಾಂವಿಧಾನಿಕವಾಗಿ ಈ ಯೋಜನೆಗೆ ವಿರೋಧ ಮಾಡಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...