ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹಿ ಹಾಕಿಸಲು ಕಡತಗಳನ್ನು ಫ್ರೀಡಂ ಪಾರ್ಕ್ ಗೆ ಅಧಿಕಾರಿಗಳು ತಂದ ಘಟನೆ ಇಂದು ನಡೆದಿದೆ.
ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ. ಸಿಎಂಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿಸಲು ಕಡತಗಳನ್ನು ಫ್ರೀಡಂ ಪಾರ್ಕ್ ಗೆ ಅಧಿಕಾರಿಗಳು ತಂದಿದ್ದಾರೆ. ಈ ವೇಳೆ ಅಧಿಕಾರಿಗಳು ತಂದಿದ್ದ ಕಡತಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಸಹಿ ಹಾಕಿದ ಬಳಿಕ ಕಡತಗಳನ್ನ ಅಧಿಕಾರಿಗಳು ತೆಗೆದುಕೊಂಡಿದ್ದಾರೆ.
BJP ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.