ಕಲಬುರಗಿ : ಪಿಯುಸಿ ಪರೀಕ್ಷೆಯಲ್ಲಿ ತಂಗಿಗೆ ಕಾಪಿ ಮಾಡಲು ಬಿಡದ ಪೊಲೀಸರ ಮೇಲೆಯೇ ಅಣ್ಣ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ಕಲಬುರಗಿ ಪರೀಕ್ಷಾ ಕೇಂದ್ರದಲ್ಲಿ ಈ ಹೈಡ್ರಾಮಾ ನಡೆದಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಕೊನೆಯ ದಿನವಾಗಿದೆ. ಪರೀಕ್ಷೆಯಲ್ಲಿ ತನ್ನ ತಂಗಿಗೆ ನಕಲು ಮಾಡಲು ಬಿಡಲಿಲ್ಲ ಎಂದು ಕಾನ್ಸ್ ಟೇಬಲ್ ಪಂಡಿತ್ ಪಾಂಡ್ರೆ ಮೇಲೆ ವಿದ್ಯಾರ್ಥಿನಿಯ ಅಣ್ಣ ಕೈಲಾಸ್ ಹಲ್ಲೆ ನಡೆಸಿದ್ದಾನೆ.
ತನ್ನ ತಂಗಿಗೆ ನಕಲು ಮಾಡಲು ಬಿಡಲಿಲ್ಲ ಎಂದು ಕಾನ್ಸ್ ಟೇಬಲ್ ಗೆ ಬೈದು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ . ಘಟನೆ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದ್ದು, ಕೈಲಾಸ್ ಹಾಗೂ ಆತನಿಗೆ ಸಾಥ್ ನೀಡಿದ ಸಮೀರ್ ರನ್ನು ಪೊಲೀಸರು ಬಂಧಿಸಿದ್ದಾರೆ.