ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಸಿಕ್ಕ ವಿಚಾರಕ್ಕೆ ಬಿಜೆಪಿ ಕಿಡಿಕಾರಿದೆ.
ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಅನ್ನದಾತರನ್ನು, ಬಳಸಿಕೊಂಡು ಬೀಸಾಡುವುದರಲ್ಲಿ ಎತ್ತಿದ ಕೈ.. ಕೃಷಿಕ ಸಮುದಾಯದ ಕುರಿತು ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುವುದಕ್ಕೆ ಚಾಮರಾಜನಗರದಲ್ಲಿ ನಡೆದಿರುವ ಘಟನೆಯೇ ಸಾಕ್ಷಿ. ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಪಾಲು ರದ್ದು, ರೈತರ ಸಬ್ಸಿಡಿ ಸ್ಥಗಿತಗೊಳಿಸಿ ಸದಾ ರೈತ ವಿರೋಧಿ ಧೋರಣೆ ಅನುಸರಿಸುವ ಸಿಎಂ ಸಿದ್ದರಾಮಯ್ಯನವರೀಗ ಅನ್ನದಾತರು ನೀಡಿದ ಮನವಿಗಳನ್ನು ಕಸದ ಬುಟ್ಟಿಗೆ ಎಸೆಯುವ ಮೂಲಕ ದುರಹಂಕಾರ ಪ್ರದರ್ಶನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ರಾಜ್ಯದ ಜನರು ತಮಗೆ ಅಧಿಕಾರ ನೀಡಿರುವುದು ಎಲ್ಲರ ಸೇವೆ ಮಾಡುವುದಕ್ಕೆ ಹೊರತು, ಅಹಂಕಾರ ಪ್ರದರ್ಶನ ಮಾಡುವುದಕ್ಕಲ್ಲ. ನಿಮ್ಮ ದುರಂಹಕಾರ ಒಂದು ದಿನ ಬೋರಲು ಬೀಳುವುದು ಗ್ಯಾರಂಟಿ ಎಂದು ಬಿಜೆಪಿ ಕಿಡಿಕಾರಿದೆ.
ಸ್ವಾರ್ಥಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ ಪರಮೇಶ್ವರ್ ಅವರನ್ನು ಸೋಲಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರು ತಮ್ಮ ಮೊದಲ ಅವಧಿಯಲ್ಲೇ ದಲಿತರ ವಿರೋಧಿ ಎಂದು ಸಾಬೀತುಪಡಿಸಿದ್ದಾರೆ. ಈಗ ದಲಿತರ ಹಣ ದುರ್ಬಳಕೆ ಹಾಗೂ ಲೂಟಿ ಮಾಡುವ ಮೂಲಕ ಶೋಷಿತ ಸಮುದಾಯಕ್ಕೆ ದ್ರೋಹ ಬಗೆದಿದ್ದು, ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಾಜಿ ಸಂಸದ ಮುನಿಸ್ವಾಮಿ ಹೇಳಿದ್ದಾರೆ.