ವಿಜಯಪುರ : ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ನೆರವೇರಿದೆ .
ಸತತ 20 ಗಂಟೆಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಸುರಕ್ಷಿತವಾಗಿ ಮಗುವನ್ನು ಹೊರಕ್ಕೆ ಕರೆತರಲಾಗಿದೆ. ಹೌದು, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದ್ದು, ಕೋಟ್ಯಾಂತರ ಜನರ ಪ್ರಾರ್ಥನೆ ಫಲಿಸಿದೆ.
ಮಗುವನ್ನು ಹೊರಕ್ಕೆ ಕರೆತಂದ ನಂತರ ಸಾತ್ವಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡ ಸತತ 20 ಗಂಟೆ ಕಾರ್ಯಾಚರಣೆ ನಡೆಸಿದೆ. ಮಗು ಸಾತ್ವಿಕ್ ಹೊರಬರುತ್ತಿದ್ದಂತೆ ಗ್ರಾಮಸ್ಥರ ಹರ್ಷೋಧ್ಗಾರ ಮುಗಿಲು ಮುಟ್ಟಿದೆ.