ಬೆಂಗಳೂರು : ನಾಗಶೇಖರ್ ನಿರ್ದೇಶನದ ಶ್ರೀನಗರ ಕಿಟ್ಟಿ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಈಗಾಗಲೇ ತನ್ನ ಹಾಡುಗಳಿಂದಲೇ ಗಾನಪ್ರಿಯರ ಗಮನ ಸೆಳೆದಿದ್ದು, ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಈ ಸಿನಿಮಾ ಜ.19 ರಂದು ರಾಜ್ಯಾದ್ಯಂತ ತೆರೆಗೆ ಬರಲಿದ್ದು, ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದೆ. ಈ ಚಿತ್ರವನ್ನು ಪವಿತ್ರ ಇಂಟರ್ನ್ಯಾಷನಲ್ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಚಲವಾದಿ ಕುಮಾರ್ ನಿರ್ಮಾಣ ಮಾಡಿದ್ದು, ಆಂಟನಿ ಸಂಕಲನ, ಸತ್ಯ ಹೆಗ್ಡೆ ಛಾಯಾಗ್ರಹಣವಿದೆ. ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಸೇರಿದಂತೆ ರಂಗಾಯಣ ರಘು, ಸಾಧು ಕೋಕಿಲ, ರಾಗಿಣಿ, ಚೇತನ್ ಚಂದ್ರ, ತೆರೆ ಹಂಚಿಕೊಂಡಿದ್ದಾರೆ.
ಈ ಚಿತ್ರವನ್ನು ಪವಿತ್ರ ಇಂಟರ್ನ್ಯಾಷನಲ್ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಚಲವಾದಿ ಕುಮಾರ್ ನಿರ್ಮಾಣ ಮಾಡಿದ್ದು, ಆಂಟನಿ ಸಂಕಲನ, ಸತ್ಯ ಹೆಗ್ಡೆ ಛಾಯಾಗ್ರಹಣವಿದೆ. ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಸೇರಿದಂತೆ ರಂಗಾಯಣ ರಘು, ಸಾಧು ಕೋಕಿಲ, ರಾಗಿಣಿ, ಚೇತನ್ ಚಂದ್ರ, ತೆರೆ ಹಂಚಿಕೊಂಡಿದ್ದಾರೆ.