
ಇತ್ತೀಚಿಗಷ್ಟೇ ಚೆನ್ನೈನಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 280 ರನ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದು, ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೆಪ್ಟೆಂಬರ್ 27ರಿಂದ ಅಕ್ಟೋಬರ್ ಒಂದರವರೆಗೆ ಕಾನ್ಪುರದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಸರಣಿ ಕೈ ವಶಪಡಿಸಿಕೊಳ್ಳಲು ರೋಹಿತ್ ಪಡೆ ಸಜ್ಜಾಗಿದೆ. ಭಾರತದ ಆಲ್ರೌಂಡರ್ಗಳಾದ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಮಿಂಚುತ್ತಿದ್ದು, ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಟೆಸ್ಟ್ ಸರಣಿಯ ಬಳಿಕ ಅಕ್ಟೋಬರ್ 6ರಿಂದ 12ರ ವರೆಗೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ.