ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಅಭಿನಯಿಸುತ್ತಿರುವ ‘ಕರಟಕ ದಮನಕ’ ಚಿತ್ರದ ‘ಹಿತ್ತಲಕ ಕರಿಬ್ಯಾಡ ಮಾವ’ ಎಂಬ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡಿನಲ್ಲಿ ಡ್ಯಾನ್ಸ್ ಕಿಂಗ್ ಪ್ರಭುದೇವ್ ಜೊತೆ ನಿಶ್ವಿಕ ನಾಯ್ಡು ಹೆಜ್ಜೆ ಹಾಕಿದ್ದಾರೆ.
ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪ್ರಭುದೇವ ಸೇರಿದಂತೆ ನಿಶ್ವಿಕ ನಾಯ್ಡು ಹಾಗೂ ಪ್ರಿಯಾ ಆನಂದ್ ತೆರೆ ಹಂಚಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ಸಂತೋಷ್ ರಾಯ್ ಛಾಯಾಗ್ರಹಣ, ವಿ ಹರಿಕೃಷ್ಣ ಸಂಗೀತವಿದೆ.