ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘IT’ ದಾಳಿ ನಡೆದಿದ್ದು, ಬೆಂಗಳೂರಿನ ಹಲವುಬಿಲ್ಡರ್ಸ್ ಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸಹಕಾರ ನಗರ ಸೇರಿದಂತೆ ಹಲವಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಕರಾವಳಿ ಭಾಗದ ಉಡುಪಿ, ಕುಂದಾಪುರ, ಕಾರ್ಕಳ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದರು.