alex Certify GOOD NEWS : ರಾಜ್ಯಾದ್ಯಂತ 17,835 ಕೋಟಿ ಹೂಡಿಕೆಗೆ ರಾಜ್ಯ ಸರ್ಕಾರ ಅನುಮೋದನೆ, 27,000 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯಾದ್ಯಂತ 17,835 ಕೋಟಿ ಹೂಡಿಕೆಗೆ ರಾಜ್ಯ ಸರ್ಕಾರ ಅನುಮೋದನೆ, 27,000 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ..!

ಬೆಂಗಳೂರು : ರಾಜ್ಯಾದ್ಯಂತ 17,835 ಕೋಟಿ ಮೊತ್ತದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, 27,000 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಿನ್ನೆ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ನಡೆದಿದ್ದು, ಹೀಗಿದೆ ಹೈಲೆಟ್ಸ್.

ರಾಜ್ಯಾದ್ಯಂತ 27,067 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ₹ 17,835 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ರೂ.8,220 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ರೂ.9,615 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿವೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ.10,433 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರೂ.2,095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ಫೋನ್ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21,723 ಜನರಿಗೆ ಉದ್ಯೋಗಗಳು ದೊರೆಯಲಿವೆ.

ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ ಎಸ್ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್ನ ಒಟ್ಟು ರೂ.8,220 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...