BREAKING : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : 2024 ರ ಫೆಬ್ರವರಿಯಲ್ಲಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.

ಈ ಮೊದಲು ಸರ್ಕಾರ ನವೆಂಬರ್ ತಿಂಗಳಿನಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧರಿಸಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾದ ಹಿನ್ನೆಲೆ ಉತ್ಸವವನ್ನು ಫೆಬ್ರವರಿಗೆ ಮುಂದೂಡಿದೆ. ಈ ಬಾರಿ ಅದ್ದೂರಿಯಾಗಿ ಸರ್ಕಾರ ಹಂಪಿ ಉತ್ಸವ ನಡೆಸಲು ಯೋಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಜಯನಗರದ ವೈಭವವನ್ನು ಇಡೀ ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಸರಕಾರ ಪ್ರತಿ ವರ್ಷ ಹಂಪಿ ಉತ್ಸವ ನಡೆಸುತ್ತಿದೆ. ಕರ್ನಾಟಕ ಪ್ರವಾಸೋದ್ಯಮದ ದೃಷ್ಟಿಯಿಂದ ಹಂಪಿ ಉತ್ಸವವು ಕರ್ನಾಟಕದ ಪ್ರತಿಷ್ಟಿತ ಉತ್ಸವವಾಗಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರಲ್ಲಿ ಇದು ಹೆಚ್ಚು ಜನಪ್ರಿಯತೆಗಳಿಸಿದೆ.

ಸಾಮಾನ್ಯವಾಗಿ ಮೂರು ದಿನಗಳ ಕಾಲ ಆಚರಿಸಲ್ಪಡುವ ಈ ಉತ್ಸವದ ಪ್ರಮುಖ ಆಕರ್ಷಣೆ ಎಂದರೆ ವರ್ಣರಂಜಿತ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು. ರಾಜ್ಯವಲ್ಲದೆ ದೇಶದ ಹಲವು ಭಾಗಗಳಿಂದಲೂ ಸಹ ಜನರು, ಪ್ರವಾಸಿಗರು ಹಾಗೂ ವಿವಿಧ ಕಲಾವಿದರು ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read