alex Certify BIG NEWS : ರಾಜ್ಯ ಸರ್ಕಾರದಿಂದ ಈ ಬಾರಿ ‘ಅದ್ದೂರಿ ಕರ್ನಾಟಕ ಸುವರ್ಣ ಸಂಭ್ರಮ’ ನಡೆಸಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ಈ ಬಾರಿ ‘ಅದ್ದೂರಿ ಕರ್ನಾಟಕ ಸುವರ್ಣ ಸಂಭ್ರಮ’ ನಡೆಸಲು ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಈ ಬಾರಿ ಅದ್ದೂರಿ ಕರ್ನಾಟಕ ಸುವರ್ಣಸಂಭ್ರಮ ನಡೆಸಲು ನಿರ್ಧರಿಸಿದೆ.

ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು.

ಅದ್ಧೂರಿಯಾಗಿ ನಡೆಯಲಿದೆ ಕರ್ನಾಟಕ ಸುವರ್ಣ ಸಂಭ್ರಮ – 50ರ ಸಮಾರೋಪ

# ಸುವರ್ಣ ಸಂಭ್ರಮದ ಭಾಗವಾಗಿ 50 ಸಾಧಕ ಮಹಿಳೆಯರ ಕುರಿತು ತಲಾ 100 ಪುಟಗಳ ಪುಸ್ತಕವನ್ನು ಸಾಹಿತ್ಯ ಅಕಾಡೆಮಿಯಿಂದ ಪ್ರಕಟಿಸಲಾಗುವುದು.
# ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ನವೆಂಬರ್ 1 ರಂದು ಅನಾವರಣಗೊಳಿಸಲಾಗುವುದು.
# ರಾಜ್ಯದ 4 ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು.
# ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿನಲ್ಲಿ ಗೋಕಾಕ್ ಚಳವಳಿ ಸಂಸ್ಕರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ನಾನಾ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಏರ್ಪಡಿಸಲಾಗುವುದು.
# ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಿಸಲು ಮನವಿ ಮಾಡಿಕೊಳ್ಳಲಾಗುವುದು.
# ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲ ಜಿಲ್ಲೆಗಳ ಪ್ರಮುಖ ಸ್ಥಳ, ಕೆಎಸ್‌ಆರ್‌ಟಿಸಿ ಬಸ್ ಮತ್ತಿತರ ಕಡೆ ಪ್ರಚುರ ಪಡಿಸಲಾಗುವುದು.
# ಶಾಲಾ- ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...