ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ಮಾಜಿ ಸಿಎಂ ಗಳಿಗೆ Z ಭದ್ರತೆಯಿತ್ತು, ಆದ್ರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದನ್ನು Y ಭದ್ರತೆಗೆ ಇಳಿಸಲಾಗಿತ್ತು, ಆದ್ದರಿಂದ ಮತ್ತೆ ಮಾಜಿ ಸಿಎಂಗಳು ನಮಗೆ Z ಭದ್ರತೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು.
ಇದೀಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಓಕೆ ಎಂದಿದ್ದು, ಮಾಜಿ ಸಿಎಂಗಳಿಗೆ Z ಭದ್ರತೆ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.
Z ಭದ್ರತೆ ಸೌಲಭ್ಯವನ್ನು ಕರ್ನಾಟಕದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಡಿ.ವಿ ಸದಾನಂದಗೌಡ , ಮಾಜಿ ಸಿಎಂ ಎಸ್ ಎಂ ಕೃಷ್ಣ , ಜಗದೀಶ್ ಶೆಟ್ಟರ್ ಈ ಸೌಲಭ್ಯ ಪಡೆಯಲಿದ್ದಾರೆ. ಕಾವೇರಿ ಹೋರಾಟ , ಹಲವು ಪ್ರತಿಭಟನೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಳಕ್ಕೆ ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು.