ಬೆಂಗಳೂರು : ಸಾರಿಗೆ ಬಸ್ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಬಸ್ ಟಿಕೆಟ್ ದರ ಶೇ 15ರಷ್ಟು ಹೆಚ್ಚಳವಾಗಲಿದೆ.
ಹೌದು. ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೇಟ್ ದರ ಜಾರಿಗೆ ಬರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇಕಡ 15ರಷ್ಟು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಲಾಗಿತ್ತು. ಅಂತೆಯೇ ಸರ್ಕಾರ ಆದೇಶ ಹೊರಡಿಸಿದೆ.ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಳ ಮಾಡಿರಲಿಲ್ಲ. ಡೀಸೆಲ್ ದರ ಹೆಚ್ಚಳ, ಸಿಬ್ಬಂದಿ ವೇತನ ಏರಿಕೆ, ಬಿಡಿ ಭಾಗಗಳ ದರ ಹೆಚ್ಚಳದಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.