ಬೆಂಗಳೂರು : ಆಗಸ್ಟ್ 19 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಆಗಸ್ಟ್ 19 ರಂದು ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಂಜೆ 4 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸಭೆಯನ್ನು ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.