ಬೆಂಗಳೂರು : 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ | ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಿದೆ.
1.ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ಸಿ) ವಿಂಗಡಿಸಿ ಪರಿಹಾರ ಪಾವತಿಸುವುದು.
2. ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ನೀಡುವುದು. ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್ಸಿ/ಎಸ್ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು. ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯ ವಿವರಗಳನ್ನು ದಾಖಲಿಸುವುದು.
3. ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ರೂ.1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.
4. ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ನಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ರೂ.6,500/-ಗಳ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.43,500/-ಗಳು ಸೇರಿದಂತೆ ಒಟ್ಟು ರೂ.50,000/-ಗಳನ್ನು ಪಾವತಿಸುವುದು.
5. ನೈಸರ್ಗಿಕ ತುರ್ತು ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಒದಗಿಸಿರುವ ಅನುದಾನವನ್ನು ನಂತರ ಲೆಕ್ಕ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.
6. ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ನಯ ಪ್ರವಾಹದಿಂದ ಬಟ್ಟೆ ಕಳೆದುಕೊಂಡರೆ ರೂ.2,500/- ಹಾಗೂ ಗೃಹೋಪಯೋಗಿ ವಸ್ತುಗಳನ್ನು ಹಾನಿಯಾದರೆ ರೂ.2,500/- ಗಳ ಪರಿಹಾರ ಪಾವತಿಸಲು ನಿಗದಿಯಾಗಿದ್ದು, ಅದರಂತೆ ರೂ.5,000/- ಗಳನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸುವಂತೆ ಆದೇಶಿಸಿದೆ.